10 ಕೆ.ಜಿ 850 ಗ್ರಾಂ ತೂಕದ ಗಾಂಜಾ ವಶ, ಮೌಲ್ಯ 14.34 ಲಕ್ಷ.
ದಿನಾಂಕ:11.05.2024 ರಂದು ಡಿ.ಜೆ ಹಳ್ಳಿ ಪೊಲೀಸ್ ಠಾಣಾ ಸರಹದಿನ ಬಂಗಾರಗಿರಿ ನಗರ ಬೆಟ್ಟದ ಬಳಿ ಯಾರೋ ಓರ್ವ ವ್ಯಕ್ತಿಯು ನಿಷೇಧಿತ ಮಾದಕ ವಸವಾದ ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಾತ್ಮಿದಾರರಿಂದ ಖಚಿತ ಮಾಹಿತಿಯೊಂದು ದೊರೆತಿರುತ್ತದೆ. ಈ ಮಾಹಿತಿಯನ್ನು ಆಧಾರಿಸಿ ಡಿ.ಜೆ.ಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿ/ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ, ಓರ್ವ ಕೇರಳ ಮೂಲದ ವ್ಯಕಿಯನ್ನು ವಶಕ್ಕೆ ಪಡೆದು, ಆತನ ವಶದಿಂದ 10 ಕೆ.ಜಿ 850 ಗ್ರಾಂ ತೂಕದ ಗಾಂಜಾ ವಶಪಡಿಸಿಕೊಳ್ಳಲಾಗಿರುತ್ತದೆ. ಮೌಲ್ಯ 4,34,000/-.
ವಶಕ್ಕೆ ಪಡೆದ ವ್ಯಕ್ತಿಯನ್ನು ಅದೇ ದಿನ ಮಾನ್ಯ ನ್ಯಾಯಾಲಯಕ್ಕೆ ಹಾಜರಡಿಸಿದ್ದು, ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.
ಈ ಕಾರ್ಯಚರಣೆಯನ್ನು ಬೆಂಗಳೂರು ನಗರ ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ.ಕುಲದೀಪ್ ಕುಮಾರ್ ಆರ್. ಜೈನ್, ಐ.ಪಿ.ಎಸ್ ಹಾಗೂ ಕೆ.ಜಿ.ಹಳ್ಳಿ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ.ಪ್ರಕಾಶ ರಾಠೋಡ ರವರ ಮಾರ್ಗದರ್ಶನದಲ್ಲಿ ಡಿ.ಜೆ.ಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಅಧಿಕಾರಿ/ಸಿಬ್ಬಂದಿಗಳ ತಂಡ ಪಕರಣವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿರುತ್ತಾರೆ.