ಜಯನಗರ ಪೊಲೀಸ್ ಠಾಣೆಯಲ್ಲಿ 2016 ನೇ ಸಾಲಿನಲ್ಲಿ ವರದಿಯಾಗಿದ್ದ. ಮಾರಣಾಂತಿಕ ಹಲ್ಲೆ ಮಾಡಿ ಕೊಲೆ ಮಾಡಲು ಪ್ರಯತ್ನಿಸಿದ್ದ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದ ಓರ್ವ ರೌಡಿ ವ್ಯಕ್ತಿಯ ವಿರುದ್ಧ ಮಾನ್ಯ ನ್ಯಾಯಾಲಯಕ್ಕೆ ಅರೋಪ ಪಟ್ಟಿ ಸಲ್ಲಿಸಿದ್ದು, ಮಾನ್ಯ ನ್ಯಾಯಾಲಯದಲ್ಲಿ ಪ್ರಕರಣವು ವಿಚಾರಣೆಯಲ್ಲಿದ್ದು, ಈ ಪ್ರಕರಣದ ಪ್ರಮುಖ ಆರೋಪಿಯು ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ಇದ್ದುದರಿಂದ 2019ನೇ ಸಾಲಿನಲ್ಲಿ ಆರೋಪಿ ವಿರುದ್ಧ ಮಾನ್ಯ ನ್ಯಾಯಾಲಯದ ಆದೇಶದಂತೆ ಸ್ವಿಟ್ ಅಪ್ ಚಾರ್ಜ್ ಶೀಟ್ ಸಲ್ಲಿಸಲಾಗಿರುತ್ತದೆ.
ಸುಮಾರು 05 ವರ್ಷಗಳಿಂದ ತಲೆಮರೆಸಿಕೊಂಡಿದ್ದ ರೌಡಿ ವ್ಯಕ್ತಿಯನ್ನು ದಿನಾಂಕ:06-06- 2024 ರಂದು BWSSB ವಾಟರ್ ಟ್ಯಾಂಕ್ ಹತ್ತಿರ, ಜಂಬೂ ಸವಾರಿ ದಿಣ್ಣೆ, ಬೆಂಗಳೂರು ರಲ್ಲಿ ಪತ್ತೆ ಮಾಡಿ ವಶಕ್ಕೆ ಪಡೆದು, ಮಾನ್ಯ ನ್ಯಾಯಾಲಯಕ್ಕೆ ಹಾಜರಡಿಸಲಾಗಿ, ಮಾನ್ಯ ನ್ಯಾಯಾಲಯವು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುತ್ತೆ.
ದಕ್ಷಿಣ ವಿಭಾಗದ ಉಪ-ಪೊಲೀಸ್ ಆಯುಕ್ತರಾದ ಶ್ರೀ ಲೋಕೇಶ್ ಭ ಜಗಲಾಸ ಐ.ಪಿ.ಎಸ್ ರವರ ಮಾರ್ಗದರ್ಶನದಲ್ಲಿ ಹಾಗೂ ಜಯನಗರ ಉಪ-ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ ನಾರಾಯಣಸ್ವಾಮಿ.ವಿ ರವರ ನೇತೃತ್ವದಲ್ಲಿ, ಜಯನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ. ದೀಪಕ್.ಆರ್ ಹಾಗೂ ಅಧಿಕಾರಿ/ಸಿಬ್ಬಂದಿಗಳ ತಂಡ ರೌಡಿ ವ್ಯಕ್ತಿಯನ್ನು ವಶಕ್ಕೆ ಪಡೆದು ಮಾನ್ಯ ನ್ಯಾಯಾಲಯಕ್ಕೆ ಹಾಜರಡಿಸುವಲ್ಲಿ ಯಶಸ್ವಿಯಾಗಿರುತ್ತಾರೆ.