ಬನಶಂಕರಿ ಪೊಲೀಸ್ ಠಾಣೆಯಲ್ಲಿ 2008ನೇ ಸಾಲಿನ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ಅಡಿಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ವಶಕ್ಕೆ ಪಡೆದ ಆರೋಪಿಗೆ ಮಾನ್ಯ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ವಿಚಾರಣೆ ಕಾಲದಲ್ಲಿ ಮಾನ್ಯ ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಯಾದ ನಂತರ ನ್ಯಾಯಾಲಯಕ್ಕೆ ಹಾಜರಾಗದೆ ಗೈರು ಹಾಜರಾಗಿರುತ್ತಾನೆ. ನಂತರ ಮಾನ್ಯ ನ್ಯಾಯಾಲಯವು ಆರೋಪಿಯ ಪತ್ತೆಗೆ ಉದ್ಯೋಷಣೆ ಆದೇಶ ಮಾಡಿ, ಪ್ರಕರಣವನ್ನು ಎಲ್.ಪಿ.ಆರ್ ಪ್ರಕರಣವೆಂದು ಪರಿಗಣಿಸಿ, ಆರೋಪಿಯನ್ನು ಪತ್ತೆ ಮಾಡುವಂತೆ ಆದೇಶಿಸಿರುತ್ತದೆ.
ಪ್ರಕರಣದಲ್ಲಿನ ಆರೋಪಿಯನ್ನು ಪತ್ತೆ ಮಾಡುವ ಸಂಬಂಧ ಬನಶಂಕರಿ ಪೊಲೀಸ್ ಇನ್ಸ್ಪೆಕ್ಟರ್ ರವರು ಒಂದು ವಿಶೇಷ ತಂಡವನ್ನು ರಚಿಸಿದ್ದು, ಆ ತಂಡದಲ್ಲಿನ ಅಧಿಕಾರಿ ಮತ್ತು ಸಿಬ್ಬಂದಿಗಳು ಆರೋಪಿಯ ಹಾಲಿ ಉದ್ಯೋಗ ಮತ್ತು ವಾಸ ಸ್ಥಳದ ಬಗ್ಗೆ ಮಾಹಿತಿಯನ್ನು ಕಲೆಹಾಕಿ, ODOB:28.06.2024 ರಂದು ಅಂಗಡಿಗ್ರಾಮ, ಬೇಲೂರು ತಾಲ್ಲೂಕು, ಹಾಸನ ಜಿಲ್ಲೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದು, ಆರೋಪಿಯನ್ನು ವರದಿಯೊಂದಿಗೆ ಮುಂದಿನ ಕ್ರಮಕ್ಕಾಗಿ ಮಾನ್ಯ ನ್ಯಾಯಾಲಯಕ್ಕೆ ಹಾಜರಡಿಸಿರುತ್ತದೆ.
ಈ ಕಾರ್ಯಾಚರಣೆಯನ್ನು ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ.ಲೋಕೇಶ್ ಭರಮಪ್ಪ ಜಗಲಾಸ, ಐ.ಪಿ.ಎಸ್ ರವರ ನಿರ್ದೇಶನದಂತೆ ಮತ್ತು ಜಯನಗರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀನಾರಾಯಣಸ್ವಾಮಿ. ಎ ರವರ ಮಾರ್ಗದರ್ಶನದಲ್ಲಿ ಬನಶಂಕರಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀಮತಿ ಸವಿತ ರವರ ನೇತೃತ್ವದ ಅಧಿಕಾರಿ/ಸಿಬ್ಬಂದಿಗಳ ತಂಡ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿರುತ್ತಾರೆ.