- ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀಗಂಧನಗರದ ಹೆಗ್ಗನಹಳ್ಳಿಯಲ್ಲಿ ವಾಸವಿರುವ ಪಿರಾದುದಾರರು ದಿನಾಂಕ:19-06-2024 ರಂದು ರಾತ್ರಿ ಅವರ ಇಬ್ಬರು ಮಕ್ಕಳನ್ನು ಟ್ಯೂಷನ್‌ನಿಂದ ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಶ್ರೀಗಂಧನಗರದಲ್ಲಿರುವ ಬಾಲಾಜಿ ಅಪಾರ್ಟ್ ಮೆಂಟ್ ಮುಂಭಾಗದ ರಸ್ತೆಯಲ್ಲಿ ಹೋಗುತ್ತಿರುವಾಗ ಯಾರೋ ಒಬ್ಬ ಅಪರಿಚಿತ ವ್ಯಕ್ತಿ ಬೈಕ್‌ನಲ್ಲಿ ಪಿರಾದಿಯ ಪಕ್ಕಕ್ಕೆ ಬಂದು ಪಿದ್ಯಾದಿ ಕೊರಳಿನಲ್ಲಿರುವ ಚಿನ್ನದ ಸರವನ್ನು ಕಿತ್ತುಕೊಂಡು ಬೈಕ್‌ನಲ್ಲಿ ಪರಾರಿಯಾಗಿರುತ್ತಾನೆಂದು ನೀಡಿದ ದೂರಿನ ಮೇರೆಗೆ ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಸರಗಳ್ಳತನ ಪ್ರಕರಣ ದಾಖಲಾಗಿರುತ್ತದೆ.
ಈ ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಕೃತ್ಯ ನಡೆದ ಸ್ಥಳದಲ್ಲಿರುವ ಸಿ.ಸಿ.ಟಿ.ವಿ ಕ್ಯಾಮರಾಗಳನ್ನು ಪರಿಶೀಲಿಸಿ, ಕೃತ್ಯವೆಸಗಿದ್ದ ವ್ಯಕ್ತಿಯ ಚಹರೆಗಳನ್ನು ಪಡೆದುಕೊಂಡು, ಕೃತ್ಯವೆಸಗಿದ್ದ ಓರ್ವ ವ್ಯಕ್ತಿಯನ್ನು ದಿನಾಂಕ-21/06/2024 ರಂದು ಹೆಗ್ಗನಹಳ್ಳಿಯ ಕೆ.ಟಿ.ಸಿ ಕಾಲೇಜು ರಸ್ತೆಯಲ್ಲಿ ವಶಕ್ಕೆ ಪಡೆದುಕೊಂಡಿರುತ್ತಾರೆ. ಆತನು ನೀಡಿದ ಮಾಹಿತಿ ಮೇರೆಗೆ ಸುಮಾರು 90 ಬೆಲೆ ಬಾಳುವ 30 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ, ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ನಂತರ ಅದೇ ದಿನ ಮಾನ್ಯ ನ್ಯಾಯಾಲಯಕ್ಕೆ ಹಾಜರಡಿಸಿ, ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿರುತ್ತದೆ.
- ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೆಗ್ಗನಹಳ್ಳಿ ಕ್ರಾಸ್, ಸಂಜೀವಿನಿನಗರದಲ್ಲಿ ವಾಸವಿರುವ ಪಿರಾದುದಾರರು ದಿನಾಂಕ:01-07-2024 ರಂದು ಮದ್ಯಾಹ್ನ ಮನೆಯಲ್ಲಿ ಒಬ್ಬರೇ ಇರುವಾಗ ಇಬ್ಬರು ವ್ಯಕ್ತಿಗಳು ಮನೆ ಬಾಡಿಗೆಗೆ ಕೇಳುವ ನೆಪದಲ್ಲಿ ಬಂದು ಪಿಯ್ಯಾದಿಯನ್ನು ಮಾತಾನಾಡಿಸುತ್ತಾ ಪಿರಾದಿಯ ಕತ್ತಿನಲ್ಲಿದ್ದ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಹೋಗಿರುತ್ತಾರೆಂದು ನೀಡಿದ ದೂರಿನ ಮೇರೆಗೆ ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣ ದಾಖಲಾಗಿರುತ್ತದೆ.
ಈ ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಕೃತ್ಯ ನಡೆದ ಸ್ಥಳದಲ್ಲಿರುವ ಸಿ.ಸಿ.ಟಿ.ವಿ ಕ್ಯಾಮರಾಗಳನ್ನು ಪರಿಶೀಲಿಸಿ, ಕೃತ್ಯವೆಸಗಿದ್ದ ವ್ಯಕ್ತಿಗಳ ಚಹರೆಗಳನ್ನು ಪಡೆದುಕೊಂಡು, ಕೃತ್ಯವೆಸಗಿದ್ದ ಇಬ್ಬರು ವ್ಯಕ್ತಿಗಳನ್ನು ದಿನಾಂಕ-05/07/2024 ರಂದು ಲಗ್ಗೆರೆ ಆಲದಮರ ಸರ್ಕಲ್ ಬಳಿ ವಶಕ್ಕೆ ಪಡೆದುಕೊಂಡಿರುತ್ತಾರೆ. ಅವರು ನೀಡಿದ ಮಾಹಿತಿ ಮೇರೆಗೆ ಸುಮಾರು 1.5 ಬೆಲೆ ಬಾಳುವ 40 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ, ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ನಂತರ ದಿನಾಂಕ:06.07.2024 ರಂದು ಮಾನ್ಯ ನ್ಯಾಯಾಲಯಕ್ಕೆ ಹಾಜರಡಿಸಿ, ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿರುತ್ತದೆ.
ಈ ಪ್ರಕರಣದ ಪತ್ತೆ ಕಾರ್ಯವನ್ನು ಉತ್ತರ ವಿಭಾಗ ಉಪ ಪೊಲೀಸ್ ಆಯುಕ್ತರಾದ ಶ್ರೀ.ಸೈದುಲು ಅಡಾವತ್, ಐ.ಪಿ.ಎಸ್. ರವರ ಮಾರ್ಗದರ್ಶನದಲ್ಲಿ ಶ್ರೀ. ಸದಾನಂದ ಎ ತಿಪ್ಪಣ್ಣವರ್, ಸಹಾಯಕ ಪೊಲೀಸ್ ಆಯುಕ್ತರು ಪೀಣ್ಯ ಉಪ ವಿಭಾಗ ರವರ ನೇತೃತ್ವದಲ್ಲಿ, ರಾಜಗೋಪಾಲನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ. ಪುನೀತ್ ಬಿ.ಎನ್. ಮತ್ತು ಸಿಬ್ಬಂದಿಯವರುಗಳು ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.