110.10 ಗ್ರಾಂ ತೂಕದ ಚಿನ್ನಾಭರಣ ಹಾಗೂ ಇತರ ವಸ್ತುಗಳ ವಶ, ಮೌಲ್ಯ 14,37 ಲಕ್ಷ.
ಬಾಣಸವಾಡಿ ಪೊಲೀಸ್ ಠಾಣಾ ಸರಹದ್ದಿನಲ್ಲಿರುವ, ಲಿಂಗರಾಜಪುರದ ಗಂಗಮ್ಮ ದೇವಸ್ಥಾನದ ಹತ್ತಿರ. ವಾಸವಿರುವ ಪಿರಾದುದಾರರು ದಿನಾಂಕ:15/04/2023 ರಂದು ಮನೆಗೆ ಬೀಗ ಹಾಕಿಕೊಂಡು ಕುಟುಂಬ ಸಮೇತ ಸಂಬಂಧಿಗಳ ಮನೆಗೆ ಹೋಗಿರುತ್ತಾರೆ. ಅದೇ ದಿನ ರಾತ್ರಿಯಲ್ಲಿ ಯಾರೋ ಕಳ್ಳರು ಮನೆಯ ಬಾಗಿಲನ್ನು ಮುರಿದು ಮನೆಯ ಕೊಠಡಿಯಲ್ಲಿದ್ದ ಬೀರುವಿನಿಂದ ಹಣ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಕಳುವು ಮಾಡಿಕೊಂಡು ಹೋಗಿರುವುದಾಗಿ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರನ್ನು ನೀಡಿರುತ್ತಾರೆ. ಈ ಕುರಿತು ಕಳುವು ಪ್ರಕರಣ ದಾಖಲಾಗಿರುತ್ತದೆ.
ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡು ಬಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಪಡೆದು, ಓರ್ವ ವ್ಯಕ್ತಿಯನ್ನು ದಿನಾಂಕ:27.06.2024 ರಂದು ಠಾಣಾ ಸರಹದ್ದಿನ ಜಾನಕಿರಾಮ ಲೇಔಟ್‌ನಲ್ಲಿ ವಶಕ್ಕೆ ಪಡೆದುಕೊಂಡು ಠಾಣೆಗೆ ಕರೆತಂದು ವಿಚಾರಣೆ ಮಾಡಲಾಗಿ, ಈ ಪ್ರಕರಣದಲ್ಲಿ ತಾನು ಕಳುವು ಮಾಡಿರುವುದಾಗಿ ತಳಿಸಿರುತ್ತಾನೆ. ಹಾಗೂ ಕಳವು ಮಾಡಿದ ವಸ್ತುಗಳನ್ನು ನನ್ನ ಬಾವಾನಿಗೆ ನೀಡಿದ್ದಾಗಿ ತಿಳಿಸಿರುತ್ತಾನೆ.
ದಿನಾಂಕ:28.06.2024 ರಂದು ಮಾನ್ಯ ನ್ಯಾಯಲಯಕ್ಕೆ ಆರೋಪಿಗಳನ್ನು ಹಾಜರುಪಡಿಸಿ, 14 ದಿನಗಳ ಕಾಲ ಪೊಲೀಸ್’ ಅಭಿರಕ್ಷೆಗೆ ಪಡೆದುಕೊಳ್ಳಲಾಗಿರುತ್ತದೆ.
ತನಿಖೆಯನ್ನು ಮುಂದುವರೆಸಿ, ಆರೋಪಿಯ ಬಾವಾನ ಬಗ್ಗೆ ಕೆ.ಜಿ.ಎಫ್‌ಗೆ ಹೋಗಿ ವಿಚಾರ ಮಾಡಲಾಗಿ ಅತನು ಕೆ.ಜಿ.ಎಫ್ ಪೊಲೀಸ್ ಠಾಣೆಯ ಗೂಂಡಾ ಕಾಯ್ದೆಯಡಿ ಕೆ.ಜಿ.ಎಫ್ ಕಾರಾಗೃಹದಲ್ಲಿರುವುದಾಗಿ ತಿಳಿದುಬಂದಿದ್ದರಿಂದ ಆರೋಪಿಯ ಬಾವಾನನ್ನು ದಿನಾಂಕ:05/07/2024 ರಂದು ಬಾಡಿ ವಾರೆಂಟ್ ಮುಖೇನ ವಶಕ್ಕೆ ಪಡೆಯಲಾಯಿತು.
ಆರೋಪಿಗಳಿಬ್ಬರು ನೀಡಿದ ಮಾಹಿತಿ ಮೇರೆಗೆ ಒಟ್ಟು 110.10 ಗ್ರಾಂ ಚಿನ್ನದ ಒಡವೆಗಳು ಹಾಗೂ 04 ದ್ವಿ-ಚಕ್ರ ವಾಹನವನ್ನು, 2 ಲ್ಯಾಪ್‌ಟಾಪ್ ಹಾಗೂ 1 ಫೋನ್‌ಗಳನ್ನು ಆರೋಪಿಯ ಬಾವಾನ ಮನೆಯಿಂದ ವಶಪಡಿಸಿಕೊಳ್ಳಲಾಯಿತು. ಅವುಗಳ ಮೌಲ್ಯ 14,37,000/-ಗಳಾಗಿರುತ್ತದೆ. ನಂತರ ಇಬ್ಬರು ಆರೋಪಿಗಳನ್ನು ದಿನಾಂಕ:08.07.2024 ರಂದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ, ಘನ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತದೆ.
ಈ ಪ್ರಕರಣದಿಂದ 1ನೇ ಆರೋಪಿಯ ವಿರುದ್ಧ 1) ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ 01 ಮನೆ ಕಳ್ಳತನ ಪ್ರಕರಣ 2) ಅವಲಳ್ಳಿ ಪೊಲೀಸ್ ಠಾಣೆಯಲ್ಲಿ 01 ಕಳ್ಳತನ & 01 ದ್ವಿಚಕ್ರ ವಾಹನ ಪ್ರಕರಣ 3) ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ 01 ದ್ವಿಚಕ್ರ ವಾಹನ ಕಳವು ಪ್ರಕರಣ 4) ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ 01 ದ್ವಿಚಕ್ರ ವಾಹನ ಕಳವು ಪ್ರಕರಣ 4) ಅವಲಳ್ಳಿ ಪೊಲೀಸ್ ಠಾಣೆಯಲ್ಲಿ 01 ದ್ವಿಚಕ್ರ ವಾಹನ ಕಳವು ಪ್ರಕರಣಗಳು ದಾಖಲಾಗಿರುತ್ತವೆ.
ಈ ಕಾರ್ಯಾಚರಣೆಯನ್ನು ಪೂರ್ವ ವಿಭಾಗದ ಉಪ-ಪೊಲೀಸ್ ಕಮೀಷನರ್ ಶ್ರೀ ದೇವಾರಾಜ್.ಡಿ. ಐ.ಪಿ.ಎಸ್. ರವರ ಮಾರ್ಗದರ್ಶನದಲ್ಲಿ ಬಾಣಸವಾಡಿ ಉಪವಿಭಾಗದ ಸಹಾಯಕ ಪೊಲೀಸ್ ಕಮೀಷನರ್, ಶ್ರೀ ಉಮಾಶಂಕರ್.ಎಂ.ಹೆಚ್. ರವರ ನೇತೃತ್ವದಲ್ಲಿ ಬಾಣಸವಾಡಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ.ಅರುಣ್ ಸಾಳುಂಕ ರವರು ಮತ್ತು ಅಧಿಕಾರಿ/ಸಿಬ್ಬಂದಿಯವರು ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.