ಬೆಂಗಳೂರು ನಗರದಲ್ಲಿ ಕಾನೂನು ಬಾಹಿರ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದ ಇಬ್ಬರು ರೌಡಿಶೀಟರ್‌ಗಳ ವಿರುದ್ಧ ಬಸವೇಶ್ವರನಗರ ಪೊಲೀಸ್ ಠಾಣೆ ಮತ್ತು ಸಿಸಿಬಿ ಅಧಿಕಾರಿಗಳು ಕರ್ನಾಟಕ ಅಕ್ರಮ ಭಟ್ಟಿ ಸಾರಾಯಿ ವ್ಯವಹಾರ, ಔಷಧಾಪರಾಧ, ಜೂಜುಕೋರ, ಗೂಂಡಾ, ಅನೈತಿಕ ವ್ಯವಹಾರಗಳ ಅಪರಾಧ ಮತ್ತು ಕೊಳಚೆ ಪ್ರದೇಶಗಳನ್ನು ಅಕ್ರಮವಾಗಿ ಆಕ್ರಮಿಸಿಕೊಳ್ಳುವ ಚಟುವಟಿಕೆಗಳ ತಡೆ ಅಧಿನಿಯಮ 1985 ಕಾಯ್ದೆ ಅಡಿಯಲ್ಲಿ ಬಂಧನದಲ್ಲಿ ಇರಿಸಲು ಸಲ್ಲಿಸಿದ್ದ ಪ್ರಸ್ತಾವನೆಯನ್ನು ಅನುಮೋದಿಸಿ ಕ್ರಮವಾಗಿ ದಿನಾಂಕ, 10/06/2024 ಮತ್ತು 14/06/2024 ರಂದು ಬಂಧನದ ಆದೇಶವನ್ನು ಹೊರಡಿಸಲಾಗಿತ್ತು.
ಈ ಬಂಧನ ಆದೇಶದ ಸಂಬಂಧ ಮಾನ್ಯ ಉಚ್ಛ ನ್ಯಾಯಾಲಯದ ಸಲಹಾ ಮಂಡಳಿಯಲ್ಲಿ ವಿಚಾರಣೆ ನಡೆಸಿದ್ದು, ದಿನಾಂಕ. 20/07/2024 ಮತ್ತು 24/07/2024 ರಂದು ಬಂಧನದ ಆದೇಶವನ್ನು ಅನುಮೋದಿಸಿ ಕ್ರಮವಾಗಿ 10/06/2024 ಮತ್ತು 14/06/2024 ರಿಂದ ಒಂದು ವರ್ಷದ ಅವಧಿಗೆ ಮುಂದುವರೆಸಿ ಆದೇಶಿಸಿರುತ್ತದೆ.
ಸಿ.ಸಿ.ಬಿ ಯ ಸಂಘಟಿತ ಅಪರಾಧ ದಳ (ಪಶ್ಚಿಮ) ಹಾಗೂ ಬಸವೇಶ್ವರನಗರ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಗೂಂಡಾ ಕಾಯ್ದೆ ಅಡಿಯಲ್ಲಿ ಈ ಬಂಧನ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಿರುತ್ತಾರೆ.