674 ಗ್ರಾಂ ಚಿನ್ನಾಭರಣ, 240 ಗ್ರಾಂ ಬೆಳ್ಳಿಯ ವಸ್ತುಗಳ ವಶ, ಮೌಲ್ಯ 150 ಲಕ್ಷ. ಹಾಗೂ ವಿದೇಶಿ ಕರೆನ್ಸಿಗಳ ವಶ.
ಬೊಮ್ಮನಹಳ್ಳಿ ಪೊಲೀಸ್ ಠಾಣಾ ಸರಹದ್ದಿನ, ಕೋಡಿಚಿಕ್ಕನಹಳ್ಳಿ ಮುಖ್ಯರಸ್ತೆಯಲ್ಲಿನ ಒಂಟಿ ಮನೆಯೊಂದರಲ್ಲಿ ಫಿರಾದುದಾರರು ವಾಸವಿರುತ್ತಾರೆ. ಫಿರಾದುದಾರರು ದಿನಾಂಕ:16/08/2024 ರಂದು ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಫಿರಾದುದಾರರು ದಿನಾಂಕ:16/08/2024 ರಂದು ಬೆಳಿಗ್ಗೆ ಕೆಲಸಕ್ಕೆಂದು ಹೊರಗೆ ಹೋಗಿದ್ದು, ನಂತರ ರಾತ್ರಿ 09.00 ಗಂಟೆಗೆ ವಾಪಸ್ ಮನೆಗೆ ಬಂದು ನೋಡಲಾಗಿ, ಯಾರೋ ಅಪರಿಚಿತರು ಮನೆಯ ಮುಖ್ಯ ಬಾಗಿಲನ್ನು ಆಯುಧದಿಂದ ಹೊಡೆದು, ಮನೆಯೊಳಗೆ ಪ್ರವೇಶಿಸಿ, ಕೊಠಡಿಯ ಬೀರುವಿನಲ್ಲಿದ್ದ ಚಿನ್ನಾಭರಣಗಳು, ಬೆಳ್ಳಿಯ ವಸ್ತುಗಳನ್ನು ಹಾಗೂ ವಿದೇಶಿ ಕರೆನ್ಸಿಯನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ತಿಳಿಸಿರುತ್ತಾರೆ. ಈ ಕುರಿತು ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಕನ್ನಕಳವು ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಬಾತ್ಮೀದಾರರಿಂದ ಮಾಹಿತಿಯನ್ನು ಕಲೆಹಾಕಿ, ದಿನಾಂಕ:19/08/2024 ರಂದು ಓರ್ವ ವ್ಯಕ್ತಿಯನ್ನು ಆಡುಗೋಡಿಯಲ್ಲಿರುವ ರಾಜೇಂದ್ರನಗರ ಮುಖ್ಯರಸ್ತೆಯಲ್ಲಿ ವಶಕ್ಕೆ ಪಡೆದುಕೊಳ್ಳಲಾಗಿರುತ್ತದೆ. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಿದಾಗ, ಈ ಪ್ರಕರಣದಲ್ಲಿ ಕಳವು ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾನೆ. ನಂತರ ಆರೋಪಿಯ ವಶದಿಂದ ಸುಮಾರು 60 ಗ್ರಾಂ ಚಿನ್ನದ ಒಡವೆಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಅದೇ ದಿನ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 5 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊ ಳ್ಳಲಾಯಿತು. ನಂತರ ತನಿಖೆ ಮುಂದುವರೆಸಿ, ಆರೋಪಿಯು ನೀಡಿದ ಮಾಹಿತಿ ಮೇರೆಗೆ ಆತನ ವಾಸದ ಮನೆಯ ಪಕ್ಕದಲ್ಲಿದ್ದ ಒಂದು ಪೆಟ್ಟಿಗೆಯಿಂದ ಕಳುವು ಮಾಡಿದ್ದ ಚಿನ್ನಾಭರಣ, ಬೆಳ್ಳಿಯ ವಸ್ತುಗಳನ್ನು ಹಾಗೂ ವಿದೇಶಿ ಕರೆನ್ಸಿಗಳನ್ನು ವಶಕ್ಕೆ ಪಡೆದುಕೊಳ್ಳಲಾಯಿತು.
ಪ್ರಕರಣದಲ್ಲಿ ವಶಕ್ಕೆ ಪಡೆದ ಆರೋಪಿಯನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಲಾಗಿ, ಆರೋಪಿಯು ಆತನ ಸಂಬಂಧಿಕನಿಗೆ ಹಾಗೂ ಸ್ನೇಹಿತನೊರ್ವನಿಗೆ ಕಳವು ಮಾಡಿದ ಚಿನ್ನಾಭರಣಗಳ ಪೈಕಿ 34 ಗ್ರಾಂ ಚಿನ್ನದ ಒಡವೆಗಳನ್ನು ನೀಡಿರುವುದಾಗಿ ತಿಳಿಸಿರುತ್ತಾನೆ. ಅವರುಗಳನ್ನು ದಿನಾಂಕ:22/08/2024 ರಂದು ತಮಿಳುನಾಡಿನ ಧರ್ಮಪುರಿಯಲ್ಲಿ ವಶಕ್ಕೆ ಪಡೆದು ಅವರುಗಳಿಂದ 8 ಗ್ರಾಂ ತೂಕದ ಚಿನ್ನದ ಒಡವೆಯನ್ನು ವಶಪಡಿಸಿಕೊಳ್ಳಲಾಯಿತು. ಈ ಪ್ರಕರಣದ ಆರೋಪಿಗಳ ಬಂಧನದಿಂದ ಒಟ್ಟು 50,00,000/-(ಐವತ್ತು ಲಕ್ಷ ರೂಪಾಯಿ) ಬೆಲೆಯ 674 ಗ್ರಾಂ ತೂಕದ ಚಿನ್ನಾಭರಣ, 240 ಗ್ರಾಂ ಬೆಳ್ಳಿಯ ಒಡವೆಗಳು ಹಾಗೂ ವಿದೇಶಿ ಕರೆನ್ಸಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ದಿನಾಂಕ:22/08/2024 ರಂದು ಮೂವರು ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.
ಈ ಕಾರ್ಯಚರಣೆಯನ್ನು ಬೆಂಗಳೂರು ನಗರ ಆತ್ಮೀಯ ವಿಭಾಗದ ಉಪ ಪೊಲೀಸ್ ಅಯುಕ್ತರು ಶ್ರೀಮತಿ.ಸಾರಾ ಫಾತಿಮ, ಐ.ಪಿ.ಎಸ್ ಮತ್ತು ಮೈಕೋಲೇಔಟ್ ಉಪ-ವಿಭಾಗದ ಸಹಾಯಕ ಪೊಲೀಸ್ ಆಯುಕ್ತರು ಶ್ರೀ.ಬಿ.ಶಿವಶಂಕರ ರೆಡ್ಡಿ ರವರ ಮಾರ್ಗದರ್ಶನದಲ್ಲಿ ಬೊಮ್ಮನಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ.ಪ್ರೀತಮ್.ಎ.ಡಿ ರವರ ನೇತೃತ್ವದ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.