ಮೈಸೂರು ದಸರಾ 2024 ಅಂಗವಾಗಿ ನಡೆಯುತ್ತಿರುವ ಯುವದಸರಾ ಕಾರ್ಯಕ್ರಮವನ್ನು ಶ್ರೀಮತಿ ಅಶ್ವಿನಿ ಪುನೀತ್ ರಾಜಕುಮಾರ್ ರವರು ಉದ್ಘಾಟನೆ ಮಾಡಿದರು.ಜಿಲ್ಲಾ ಪೊಲೀಸ್ ಅಧೀಕ್ಷಕರು ಮತ್ತು ಯುವ ದಸರಾ ಉಪ ಸಮಿತಿಯ ಉಪ ವಿಶೇಷ ಅಧಿಕಾರಿಗಳಾದ ಶ್ರೀ ವಿಷ್ಣುವರ್ಧನ ಎನ್ ಐಪಿಎಸ್ ರವರು ಮುಖ್ಯ ಅತಿಥಿಗಳನ್ನು ಸ್ವಾಗತಿಸಿ ಸನ್ಮಾನಿಸಿದರು.ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ರವರು ಹಾಗೂ ದಸರಾ ವಿಶೇಷ ಅಧಿಕಾರಿಗಳಾದ ಜಿಲ್ಲಾಧಿಕಾರಿಗಳಾದ ಶ್ರೀ ಲಕ್ಷ್ಮಿಕಾಂತ್ ರೆಡ್ಡಿ ಐಎಎಸ್ ರವರು ಹಾಗೂ ಇನ್ನಿತರ ಜನಪ್ರತಿನಿಧಿಗಳು ಅಧಿಕಾರಿಗಳು ಉಪಸ್ಥಿತರಿದ್ದರು.