ಉಡುಪಿ ಜಿಲ್ಲೆಯಲ್ಲಿ ಕಳೆದ ಹದಿನೈದು ದಿನಗಳಿಂದ ಗಾಂಜಾ ಸೇವನೆ ಪ್ರಕರಣಗಳ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಉಡುಪಿ ಜಿಲ್ಲೆಯಲ್ಲಿ ಒಟ್ಟು 35 ಪ್ರಕರಣಗಳು ದಾಖಲಾಗಿರುತ್ತದೆ. ಇದರಲ್ಲಿ ಒಟ್ಟು 35 ಅಪರಾಧಿಗಳ ವಿರುಧ್ದ ಕ್ರಮ ಕೈಗೊಳ್ಳಲಾಗಿರುತ್ತದೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಒಟ್ಟು 7 ಪ್ರಕರಣ ದಾಖಲಾಗಿದ್ದು, 7 ಆರೋಪಿತರುಗಳು, ಮಣಿಪಾಲ ಪೊಲೀಸ್ ಠಾಣೆಯಲ್ಲಿ ಒಟ್ಟು 6 ಪ್ರಕರಣ ದಾಖಲಾಗಿದ್ದು, 6 ಆರೋಪಿತರುಗಳು, ಕಾರ್ಕಳ ನಗರ ಮತ್ತು ಮಲ್ಪೆ ಪೊಲೀಸ್ ಠಾಣೆಗಳಲ್ಲಿ ತಲಾ 5 ಪ್ರಕರಣ ದಾಖಲಾಗಿದ್ದು, ತಲಾ 5 ಆರೋಪಿತರುಗಳು, ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ 4 ಪ್ರಕರಣಗಳು ದಾಖಲಾಗಿದ್ದು, 4 ಆರೋಪಿತರುಗಳು, ಕಾಪು ಮತ್ತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ತಲಾ 2 ಪ್ರಕರಣ ದಾಖಲಾಗಿದ್ದು, ತಲಾ 2 ಆರೋಪಿತರುಗಳು, ಹಿರಿಯಡಕ, ಕೊಲ್ಲೂರು, ಕೋಟ ಮತ್ತು ಶಿರ್ವಾ ಪೊಲೀಸ್ ಠಾಣೆಗಳಲ್ಲಿ ತಲಾ 1 ಪ್ರಕರಣಗಳು ದಾಖಲಾಗಿದ್ದು, ಒಟ್ಟು 4 ಆರೋಪಿತರ ವಿರುದ್ದ ಕ್ರಮ ಕೈಗೊಳ್ಳಲಾಗಿರುತ್ತದೆ. ಉಡುಪಿ ಜಿಲ್ಲೆಯಲ್ಲಿ ಗಾಂಜಾ ಸೇವನೆ ಮತ್ತು ಸರಭರಾಜು ಪ್ರಕರಣಗಳ ವಿರುದ್ದ ಕಟ್ಟುನಿಟ್ಟಿನ ಕ್ರಮವನ್ನು ನಿರಂತರ ಜರುಗಿಸಲಾಗುವುದು.
ಉಡುಪಿಯ ನಮ್ಮ ವರದಿಗಾರ,

ವಿಲ್ಸನ್ ಡಿ’ಸೋಜ