ಸಾಗರ್ ರತ್ನ – ಓಶಿಯನ್ ಪರ್ಲ್ ಗ್ರೂಪ್ ಆಫ್ ಹೋಟೆಲ್ಸ್ ಮಾಲೀಕರಾದ
ಶ್ರೀ ಜಯರಾಮ್ ಬನಾನ್ ಇವರು ಮಹೇಂದ್ರ ಕಂಪನಿಯ ಬೊಲೆರೋ ಜೀಪ್ ನ್ನು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ನೀಡಿರುತ್ತಾರೆ.
ದಿನಾಂಕ 05.01.2026 ರಂದು ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಶ್ರೀ ಜಯರಾಮ್ ಬನಾನ್ ರವರು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ್, ಐಪಿಎಸ್ ರವರಿಗೆ ಜೀಪಿನ ಕೀ ಯನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶ್ರೀ ತಿಮ್ಮಪ್ಪ ಗೌಡ, ಪೊಲೀಸ್ ಉಪಾಧೀಕ್ಷಕರು, ಡಿಎಆರ್, ಉಡುಪಿ, ಶ್ರೀ ರವಿ ಕುಮಾರ್, ಪೊಲೀಸ್ ನಿರೀಕ್ಷಕರು, ಜಿಲ್ಲಾ ಸಶಸ್ತ್ರ ಮೀಸಲು ಪಡೆ ಹಾಗೂ ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯ ಸಹಾಯಕ ಆಡಳಿತ ಅಧಿಕಾರಿಯವರಾದ ಶ್ರೀ ಗೋಪಾಲ್ ಇವರು ಹಾಜರಿದ್ದರು.
ಉಡುಪಿಯ ನಮ್ಮ ವರದಿಗಾರ,

ವಿಲ್ಸನ್ ಡಿ’ಸೋಜ







