ನಾಗು ಗ್ರೂಪ್ ಕುಂದಾಪುರ ವ್ಯವಸ್ಥಾಪಕ ನಿರ್ದೇಶಕ ಶ್ರೀ ಕುಶಾಲ್ ಶೆಟ್ಟಿ ಅವರು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ಮಹೇಂದ್ರ ಕಂಪನಿಯ ಬೊಲೆರೊ ಜೀಪ್ ಅನ್ನು ಕೊಡುಗೆಯಾಗಿ ನೀಡಿದ್ದಾರೆ. ದಿನಾಂಕ 14.01.2026 ರಂದು ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಶ್ರೀ ಕುಶಾಲ್ ಶೆಟ್ಟಿ ಅವರು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಐಪಿಎಸ್ ಅವರಿಗೆ ಜೀಪಿನ ಕೀಲಿಯನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ, ಉಡುಪಿ ಡಿಎಆರ್‌ನ ಉಪ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ತಿಮ್ಮಪ್ಪ ಗೌಡ, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ನಿರೀಕ್ಷಕ ಶ್ರೀ ರವಿ ಕುಮಾರ್ ಉಪಸ್ಥಿತರಿದ್ದರು.
ಉಡುಪಿಯ ನಮ್ಮ ವರದಿಗಾರ,

ವಿಲ್ಸನ್ ಡಿ’ಸೋಜ







