ಉಡುಪಿ: ಕಾರ್ಕಳ ತಾಲೂಕಿನ ಮಿಯಾರು ಕೊಂಡಂಕಲ್ ಬಳಿ ಶುಕ್ರವಾರ ಖಾಸಗಿ ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.
ಧರ್ಮಸ್ಥಳದಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಬಸ್ ಮಿಯಾರು ಕೊಂಡಂಕಲ್ ಬಳಿ ವೇಗವಾಗಿ ಬರುತ್ತಿದ್ದಾಗ ಎದುರು ದಿಕ್ಕಿನಿಂದ ಬರುತ್ತಿದ್ದ ತೂಫಾನ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ತೂಫಾನ್ ವಾಹನ ಸಂಪೂರ್ಣವಾಗಿ ಜಖಂಗೊಂಡಿದೆ.
ಆರಂಭದಲ್ಲಿ ಮೃತರನ್ನು ಗುರುತಿಸಲಾಗಿದ್ದು, ಗಾಯಾಳುಗಳನ್ನು ತಕ್ಷಣ ಕಾರ್ಕಳ ಸರ್ಕಾರಿ ಆಸ್ಪತ್ರೆ ಮತ್ತು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಕಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
ಕಾರ್ಕಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಡುಪಿಯ ನಮ್ಮ ವರದಿಗಾರ,

ವಿಲ್ಸನ್ ಡಿ’ಸೋಜ







