ದಿನಾಂಕ 21.01.2026 ರಂದು ಸಂಜೆ ಸುಮಾರು 5:00 ಗಂಟೆಗೆ ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ನಕ್ರೆ ಹಾಂಕ್ರಾಡಿ ಎಂಬಲ್ಲಿ ರವಿಚಂದ್ರ ಹಾಗೂ ಪವನ್ ಎಂಬುವರು ಅಕ್ರಮವಾಗಿ ಯಾವುದೇ ಪರವಾನಿಗೆ ಹೊಂದದೇ ಸ್ಪೋಟಕವನ್ನು ಬಳಸಿ ಕಲ್ಲು ಬಂಡೆಗಳನ್ನು ಒಡೆದಿದ್ದು, ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ : 13/2026 ಕಲಂ.9(B)1(b), Explosive Act 1884, ಕಲಂ. 5 Explosive Substance Act 1908, ಕಲಂ. 287, ಜೊತೆಗೆ 3(5) BNS 2023 ರಂತೆ ಪ್ರಕರಣ ದಾಖಲಾಗಿರುತ್ತದೆ.
ಈ ಪ್ರಕರಣದ ತನಿಖೆಯನ್ನು ಕೈಗೊಂಡ ಕಾರ್ಕಳ ನಗರ ಪೊಲೀಸ್ ಠಾಣಾ ಪಿಎಸ್‌ಐ ಮುರುಳೀಧರ ನಾಯ್ಕ ಹಾಗೂ ಸಿಬ್ಬಂದಿಯವರು ಆರೋಪಿತರಾದ ಟಿ.ರವಿಚಂದ್ರ (55 ), ತಂದೆ. ತಂಗವೇಲು, ಅಯ್ಯಪ್ಪ ನಗರ ಕುಕ್ಕುಂದೂರು ಗ್ರಾಮ, ಕಾರ್ಕಳ ತಾಲೂಕು ಹಾಗೂ ಆತನ ಮಗ ಪವನ್ ಕುಮಾರ್(31) ಅಯ್ಯಪ್ಪ ನಗರ ಕುಕ್ಕುಂದೂರು ಗ್ರಾಮ ಕಾರ್ಕಳ ತಾಲೂಕು ಇವರನ್ನು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
ಆರೋಪಿತರಿಗೆ ಮಾನ್ಯ ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

ಉಡುಪಿಯ ನಮ್ಮ ವರದಿಗಾರ,

ವಿಲ್ಸನ್ ಡಿ’ಸೋಜ






