ಬೇಲೂರು : ಬೇಲೂರು ಪಟ್ಟಣದ ಬಂಟೇನಹಳ್ಳಿ ಪ್ರದೇಶದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬೇಲೂರು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಘಟನೆ ನಡೆದಿದೆ.
ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಬೇಲೂರು ವೃತ್ತ ನಿರೀಕ್ಷಕ ರೇವಣ್ಣ ನೇತೃತ್ವದ ತಂಡ ಬಂಟೇನಹಳ್ಳಿಯ ಫಾರೆಸ್ಟ್ ಕಚೇರಿ ಸಮೀಪ ಸ್ಕೂಟಿಯಲ್ಲಿ ಗಾಂಜಾ ಮಾರಾಟಕ್ಕೆ ಪ್ರಯತ್ನಿಸುತ್ತಿದ್ದ ಶಶಾಂಕ್ (ಬಂಟೇನಹಳ್ಳಿ ನಿವಾಸಿ) ಹಾಗೂ ದಿಲೀಪ್ (ಹೊಸನಗರ ನಿವಾಸಿ) ಎಂಬ ಇಬ್ಬರನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳ ತಪಾಸಣೆ ವೇಳೆ ಅವರ ಬಳಿ ಸುಮಾರು 220 ಗ್ರಾಂ ಗಾಂಜಾ ಪತ್ತೆಯಾಗಿದ್ದು, ಅಂದಾಜು ಮೌಲ್ಯ ರೂ. 50,000 ಎಂದು ತಿಳಿದುಬಂದಿದೆ..
ಪೊಲೀಸರು ಆರೋಪಿಗಳ ಬಳಿ ಇದ್ದ ಗಾಂಜಾವನ್ನು ವಶಪಡಿಸಿಕೊಳ್ಳುವುದರ ಜೊತೆಗೆ, ಅಕ್ರಮ ಚಟುವಟಿಕೆಗೆ ಬಳಸುತ್ತಿದ್ದ ಸ್ಕೂಟಿಯನ್ನೂ ಜಪ್ತಿ ಮಾಡಿದ್ದಾರೆ.
ಬಳಿಕ ಇಬ್ಬರು ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮದಂತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಈ ದಾಳಿಯ ಸಂದರ್ಭದಲ್ಲಿ ಬೇಲೂರು ಪೊಲೀಸ್ ಠಾಣೆಯ ಪಿಎಸ್‌ಐ ಶಿವನ್ ಗೌಡ ಜಿ. ಪಾಟೀಲ್, ಸಿಬ್ಬಂದಿಗಳಾದ ಸತೀಶ್, ಅಣ್ಣಪ್ಪ, ಉಮೇಶ್, ಪ್ರದೀಪ್ ಹಾಗೂ ಪಂಚರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







