ದಿನಾಂಕ 18.01.2026 ರಂದು ಬೆಳಗ್ಗಿನ ಜಾವ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯ ತಂಡ ಚಿಕ್ಕಮಗಳೂರು ನಗರದ ರಾಮೇಶ್ವರನಗರದಲ್ಲಿ ಕಾರ್ಯಾಚರಣೆ ನಡೆಸಿ ಓರ್ವ ವ್ಯಕ್ತಿಯನ್ನು ಬಂಧಿಸಿ, 1.220 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಂಡಿರುತ್ತಾರೆ. ಈ ಕುರಿತು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಮೊ. ನಂ. 09/2026 ಕಲಂ 20(B)(ii) NDPS ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಸದರಿ ಪ್ರಕರಣದಲ್ಲಿ ತನಿಖೆಯನ್ನು ಮುಂದುವರೆಸಿ ಪ್ರಕರಣದಲ್ಲಿನ ಪ್ರಮುಖ ಆರೋಪಿಯನ್ನು ದಸ್ತಗಿರಿ ಮಾಡಿ ಚಿಕ್ಕಮಗಳೂರು ನಗರದ ರೈಲ್ವೆ ನಿಲ್ದಾಣದ ಹತ್ತಿರ 5.850 ಕೆಜಿ ತೂಕವುಳ್ಳ ಅಂದಾಜು ರೂ. 3 ಲಕ್ಷ ಮೌಲ್ಯದ ಗಾಂಜಾ ಸೊಪ್ಪನ್ನು ವಶಕ್ಕೆ ಪಡೆದುಕೊಳ್ಳಲಾಗಿರುತ್ತದೆ.
ಸದರಿ ಕಾರ್ಯಾಚರಣೆಯಲ್ಲಿ ಶ್ರೀ. ಅಭಯ್ ಪ್ರಕಾಶ್ ಸೋಮನಾಳ್, ಪೊಲೀಸ್ ನಿರೀಕ್ಷಕರು, ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ, ಶ್ರೀ. ಶಂಭುಲಿಂಗನಗೌಡ, ಶ್ರೀ. ಧನರಾಜ್, ಪಿಎಸ್ಐ ಹಾಗೂ ಪೊಲೀಸ್ ಸಿಬ್ಬಂದಿಗಳಾದ ಶ್ರೀ. ಪ್ರದೀಪ್ ಹೆಚ್ ಜಿ, ಶ್ರೀ. ನವೀನ್, ಶ್ರೀ. ಮಹಮ್ಮದ್ ರಫೀಕ್ ಘಾಟ್ನಿ ಮತ್ತು ಶ್ರೀ. ಮಂಜುನಾಥ್ ಜಂಬೂರ ರವರು ಭಾಗವಹಿಸಿರುತ್ತಾರೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಣಿಕೆ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಮುಂದುವರಿಯಲಿದೆ.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







