ಬೆಂಗಳೂರು: ಒಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ವೃದ್ಧ ಮಹಿಳೆಯೊಬ್ಬರ ಚಿನ್ನದ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದ ಇಬ್ಬರು ಸರಗಳ್ಳರನ್ನು ಜ್ಞಾನಭಾರತಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಪ್ರಮೋದ್ ಬಸಪ್ಪ ಮತ್ತು ಮನೋಹರ್ ಎಂದು ಗುರುತಿಸಲಾಗಿದೆ. ಆರೋಪಿಗಳು 18 ರಂದು ಸಂಜೆ ಕುಕ್ಕರ್ ರಿಪೇರಿ ಮಾಡಿಸಿ ಮನೆಗೆ ಮರಳುತ್ತಿದ್ದ ವೃದ್ಧ ಮಹಿಳೆಯನ್ನು ಗುರಿಯಾಗಿಸಿಕೊಂಡು ಆಕೆಯ ಕುತ್ತಿಗೆಯಿಂದ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡ ಜ್ಞಾನಭಾರತಿ ಪೊಲೀಸರು, ಸಿಸಿಟಿವಿ ದೃಶ್ಯಾವಳಿ ಮತ್ತು ತಾಂತ್ರಿಕ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ವಿಚಾರಣೆಯ ಸಮಯದಲ್ಲಿ, ಕದ್ದ ಚಿನ್ನದ ಸರವನ್ನು ಗದಗದಲ್ಲಿ ಠೇವಣಿ ಇಟ್ಟಿದ್ದ ಹಣದಿಂದ ಆರೋಪಿಗಳು ಐಷಾರಾಮಿ ಜೀವನ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಬಂಧಿತರಿಂದ ಸುಮಾರು 45 ಗ್ರಾಂ ತೂಕದ ಐದು ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ಹೆಚ್ಚಿನ ಕಾನೂನು ಕ್ರಮ ಕೈಗೊಳ್ಳಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







