ತುಮಕೂರು: ದೇವಸ್ಥಾನಗಳನ್ನು ಗುರಿಯಾಗಿಸಿಕೊಂಡು ಸರಣಿ ಕಳ್ಳತನ ಮಾಡುತ್ತಿದ್ದ ಖದೀಮರ ಗುಂಪನ್ನು ತುಮಕೂರು ಜಿಲ್ಲೆಯ ತುರುವೇಕೆರೆ ಪೊಲೀಸರು ಬಂಧಿಸಿದ್ದಾರೆ. ತುಮಕೂರು, ಹಾಸನ ಮತ್ತು ಮಂಡ್ಯ ಜಿಲ್ಲೆಗಳ 22 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿರುವುದಾಗಿ ಬಂಧಿತರು ವಿಚಾರಣೆಯ ಸಮಯದಲ್ಲಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಗಳಾದ ಲಯನ್ ಎಟಿಎಂ (29), ಮಾಗಡಿ ಮಂಜ @ ಮಂಜುನಾಥ್ (28), ಚಂದನ್ (19), ಮಧುಸೂದನ್ (24), ಬಾಬು (22) ಮತ್ತು ನರಸಿಂಹ ಮೂರ್ತಿ (32) ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಬಳಿಯ ಜೋಡಿಕಟ್ಟೆ ಗ್ರಾಮದ ಬಸ್ ನಿಲ್ದಾಣದ ಬಳಿ ಕಳ್ಳತನ ಮಾಡಲು ಯೋಜಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಮೆಣಸಿನ ಪುಡಿ, ಮಚ್ಚು ಮತ್ತು ಅಪರಾಧಕ್ಕಾಗಿ ಸಿದ್ಧಪಡಿಸಿದ ಇತರ ವಸ್ತುಗಳು ಪತ್ತೆಯಾಗಿವೆ. ಪೊಲೀಸ್ ತನಿಖೆಯಲ್ಲಿ ಆರೋಪಿಗಳು ದೇವಸ್ಥಾನದ ಹಣ ಮತ್ತು ಆಭರಣಗಳನ್ನು ಕದ್ದಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತ ವ್ಯಕ್ತಿಗಳಿಂದ ಸುಮಾರು ₹14 ಲಕ್ಷ ಮೌಲ್ಯದ 86 ಗ್ರಾಂ ತೂಕದ 25 ಚಿನ್ನದ ಬಾರ್ಗಳು, 3 ಬೈಕ್ಗಳು ಮತ್ತು 1 ಆಟೋವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ






