ಮೈಸೂರು: ರಾಷ್ಟಿçÃಯ ಹೆದ್ದಾರಿ ರಸ್ತೆ ನಿರ್ಮಾಣ ಕಾಮಗಾರಿ ನಡೆಸುವ ಸ್ಥಳದಲ್ಲಿ 4 ಲಕ್ಷರೂ ಮೌಲ್ಯದ 14ಎಂಆರ್ಎಫ್ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಬಿಳಿಕೆರೆ ಠಾಣಾ ಪೊಲಿಸರು ಯಶಸ್ವಿಯಾಗಿದ್ದಾರೆ. ಸರಗೂರು ತಾಲೂಕಿನ ಕೆ.ಬೆಳ್ತೂರು ಗ್ರಾಮದ ವಿವೇಕ ಹಾಗೂ ಮೈಸೂರು ನಗರದ ಕುರುಬಾರಹಳ್ಳಿಯ ಪ್ರಸನ್ನ ಅಲಿಯಾಸ್ ರಾಮು ಬಂಧಿತರು. ರಾಷ್ಟಿçÃಯ ಹೆದ್ದಾರಿ ಕಾಮಗಾರಿ ಗುತ್ತಿಗೆ ಪಡೆದಿರುವ ಕೆ.ಎನ್.ಆರ್.ಕನ್ಟçಕ್ಷನ್ ಲಿ.ನ ಗೋದಾಮಿನಲ್ಲಿ ಸಂಗ್ರಹಿಸಿದ್ದ 14 ಎಂ.ಆರ್.ಎಫ್. ಟೈಯರ್ಗಳನ್ನು ಆ.9ರಂದು ಕಳ್ಳತನ ಮಾಡಲಾಗಿತ್ತು. ಈ ಸಂಬAಧ ಬಿಳಿಕೆರೆ ಠಾಣೆಯಲ್ಲಿ ಕಂಪನಿಯ ಸಾರ್ವಜನಿಕ ಸಂಪರ್ಕಅಧಿಕಾರಿ ಶ್ರೀನಿವಾಸ್ ರಾಜ್ ಎಂಬುವವರು ದೂರು ದಾಖಲಿಸಿದ್ದರು. ಪ್ರಕರಣದ ಬೆನ್ನತ್ತಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ಕೃತ್ಯಕ್ಕೆ ಬಳಸಿದ್ದ ಅಶೋಕ ಲೈಲಾಂಡ್ ಗೂಡ್ಸ್ ವಾಹನ 14 ಟಯರ್ಗಳನ್ನು ವಶಕ್ಕೆ ಪಡೆದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ. ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮತ್ತೊಂದು ಕಳ್ಳತನ ಪ್ರಕರಣಕ್ಕೆ ಸಂಬAಧಿಸಿದAತೆ ಕೇರಳ ರಾಜ್ಯ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿ, ಆರೋಪಿಗಳಿಂದ ಅಂದಾಜು 9 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 4.50 ಲಕ್ಷ ಮೌಲ್ಯದ ಬಲೆನೋ ಕಾರನ್ನು ವಶಪಡಿಸಿಕೊಂಡು ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ






