ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಗಣಿಯ ಇಟ್ಟಿನ ನಗರದಲ್ಲಿ ವಾಸವಿರುವ ಪಿರಾದುದಾರರು ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ದಿನಾಂಕ:03/09/2024 ರಂದು ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ಕೋಣನಕುಂಟೆಯಲ್ಲಿರುವ ಫೋರಂ ಮಾಲ್ ನಲ್ಲಿರುವ ಇಟಾಲಿಯನ್ ಪೀಜಾ ರೆಸ್ಟೋರೆಂಟ್ ನಲ್ಲಿ ಕೆಲಸ ಮಾಡಿಕೊಂಡಿದ್ದು, ದಿನಾಂಕ:02/09/2024 ರಂದು ಪಿರ್ಯಾದಿದಾರರು ಸಂಜೆ ಘೋರಂ ಮಾಲ್ ಗೆ ಕೆಲಸಕ್ಕೆಂದು ಬಂದು ತಮ್ಮ ದ್ವಿ-ಚಕ್ರ ವಾಹನವನ್ನು ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿ ಕೆಲಸಕ್ಕೆ ಹೋಗಿರುತ್ತಾರೆ. ಕೆಲಸವನ್ನು ಮುಗಿಸಿ ಮಧ್ಯರಾತ್ರಿ ಮನೆಗೆ ಹೋಗುವ ಸಲುವಾಗಿ ಫಿರಾದುದಾರರು ವಾಪಸ್ ಪಾರ್ಕಿಂಗ್ ಸ್ಥಳಕ್ಕೆ ಬಂದು ತಮ್ಮ ದ್ವಿ-ಚಕ್ರ ವಾಹನವನ್ನು ನೋಡಲಾಗಿ, ಫಿರಾದುದಾರರ ವಾಹನವನ್ನು ಯಾರೋ ಅಪರಿಚಿತ ವ್ಯಕ್ತಿಗಳು ಕಳವು ಮಾಡಿಕೊಂಡು ಹೋಗಿರುತ್ತಾರೆಂದು ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ದ್ವಿ-ಚಕ್ರ ವಾಹನ ಕಳವು ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಬಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ದಿನಾಂಕ:06/09/2024 ರಂದು ಮಲ್ಲೇಶ್ವರಂ ರೈಲ್ವೇನಿಲ್ದಾಣದ ಹತ್ತಿರವಿರುವ ಬೇಕರಿಯ ಬಳಿ ಪ್ರಕರಣಕ್ಕೆ ಸಂಬಂಧಿಸಿದ ಒಂದು ದ್ವಿ-ಚಕ್ರ ವಾಹನ ಸಮೇತ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಗಳನ್ನು ವಿಚಾರಣೆ ಮಾಡಲಾಗಿ, ಈ ಪ್ರಕರಣದಲ್ಲಿ ದ್ವಿ-ಚಕ್ರ ವಾಹನವನ್ನು ಕಳವು ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾರೆ ಹಾಗೂ ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳ ಸರಹದ್ದಿನಲ್ಲಿ ಒಟ್ಟು 8 ದ್ವಿ-ಚಕ್ರ ವಾಹನಗಳನ್ನು ಕಳವು ಮಾಡಿರುವುದಾಗಿಯೂ ಸಹ ತಿಳಿಸಿರುತ್ತಾರೆ.
ದಿನಾಂಕ:07/09/2024 ರಂದು ದೊಡ್ಡಕಲ್ಲಸಂದ್ರದ, ನಾರಾಯಣನಗರ 1ನೇ ಹಂತದ ಖಾಲಿ ಜಾಗದಲ್ಲಿ, ನಿಲ್ಲಿಸಿದ್ದ 8 ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಯಿತು. ಒಟ್ಟಾರೆಯಾಗಿ ಈ ಆರೋಪಿಗಳಿಂದ 9 ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಯಿತು. ಇವುಗಳ ಮೌಲ್ಯ * 5,00,000/- (ಐದು ಲಕ್ಷ ರೂಪಾಯಿ).
ದಿನಾಂಕ:07/09/2024 ರಂದು ಇಬ್ಬರು ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗಳಿಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.
ಈ ಪ್ರಕರಣದ ಆರೋಪಿಗಳ ಪತ್ತೆಯಿಂದ 1)ಕೋಣಕುಂಟೆ ಪೊಲೀಸ್ ಠಾಣೆಯ-4 ದ್ವಿ-ಚಕ್ರ ವಾಹನಗಳ ಕಳುವು ಪ್ರಕರಣಗಳು 2)ವಿ.ವಿ.ಪುರಂ ಪೊಲೀಸ್ ಠಾಣೆಯ-1 ದ್ವಿ-ಚಕ್ರ ವಾಹನ ಕಳುವು ಪ್ರಕರಣ 3)ಜಯನಗರ ಪೊಲೀಸ್ ಠಾಣೆಯ-1 ದ್ವಿ-ಚಕ್ರ ವಾಹನ ಕಳುವು ಪ್ರಕರಣ 4)ಇಂದಿರಾನಗರ ಪೊಲೀಸ್ ಠಾಣೆಯ-1 ದ್ವಿ-ಚಕ್ರ ವಾಹನ ಕಳುವು ಪ್ರಕರಣಗಳು ಪತ್ತೆಯಾಗಿರುತ್ತವೆ. ಉಳಿದ 2 ದ್ವಿ-ಚಕ್ರ ವಾಹನಗಳ ಮಾಲೀಕರುಗಳ ಪತ್ತೆ ಕಾರ್ಯ ಮುಂದುವರೆದಿದೆ.
ಈ ಕಾರ್ಯಾಚರಣೆಯನ್ನು ಬೆಂಗಳೂರು ನಗರ, ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ.ಲೊಕೇಶ್.ಭ.ಜಗಲಾಸರ್ ಐ.ಪಿ.ಎಸ್ ರವರ ಮಾರ್ಗದರ್ಶನದಲ್ಲಿ ಹಾಗೂ ಸುಬ್ರಮಣ್ಯಪುರ ಉಪ ವಿಭಾಗದ ಎ.ಸಿ.ಪಿ ರವರಾದ ಶ್ರೀ.ಗಿರೀಶ್ ಎಸ್.ಬಿ ರವರ ಉಸ್ತುವಾರಿಯಲ್ಲಿ ಕೋಣನಕುಂಟೆ ಪೊಲಿಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ.ಪಾಪಣ್ಣ.ಎಂ ರವರ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.