ರಾಜ್ಯದಲ್ಲೇ ಮೊಟ್ಟಮೊದಲ ಬಾರಿಗೆ ವಿದೇಶಗಳಲ್ಲಿ ಇರುವಂತೆ ‘ಅಪರಾಧ ಸ್ಥಳ ಪರಿಶೀಲನಾಧಿಕಾರಿ’ ಎಂಬ ಹೊಸ ಹುದ್ದೆಗಳನ್ನು ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸೃಷ್ಟಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅಪರಾಧ ನಡೆದ ಸ್ಥಳವನ್ನು ವೈಜ್ಞಾನಿಕವಾಗಿ ಪರಿಶೀಲಿಸಿ, ಅಲ್ಲಿ ಎಲ್ಲ ರೀತಿಯ ಸಾಕ್ಷ್ಯವನ್ನು ಸಂಗ್ರಹಿಸಿ ಅಪರಾಧಿಯನ್ನು ಪತ್ತೆ ಮಾಡುವಲ್ಲಿ ‘ಅಪರಾಧ ಸ್ಥಳ ಪರಿಶೀಲನಾಧಿಕಾರಿ’ (scene of crime officer) ಪರಿಣಿತಿ ಹೊಂದಿರುತ್ತಾರೆ. ಮೊದಲ ಹಂತದಲ್ಲಿ 206 ಹುದ್ದೆಗಳಿಗೆ ಅನುಮೋದನೆ ನೀಡಲಾಗಿದೆ ಎಂದರು. […]