ಪೊನ್ನಂಪೇಟೆ ಮತ್ತು ಗೋಣಿಕೊಪ್ಪ ಠಾಣಾ ಸರಹದ್ದಿನಲ್ಲಿ ವ್ಯಾಪಾರ ಮಳಿಗೆಗಳ ಕ್ಯಾಶ್ ಕೌಂಟರಿನಿಂದ ಹಣ ಕಳ್ಳತನ ಮಾಡಿದ್ದ 3 ಪ್ರತ್ಯೇಕ ಪ್ರಕರಣಗಳನ್ನು ಪೊನ್ನಂಪೇಟೆ ಠಾಣೆ ಪೊಲೀಸರ ಪತ್ತೆ ಮಾಡಿ ಓರ್ವ ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ. ಪ್ರಕರಣ-1 ದಿನಾಂಕ: 20-04-2022 ರಂದು ರಾತ್ರಿ ಪೊನ್ನಂಪೇಟೆ ನಿವಾಸಿ ಸೀತಾರಾಮ್ ಎಂಬುವವರು ಕಾಫಿ ಅಂಗಡಿಯ ಶೆಟರ್ಸ್ ಬೀಗ ವನ್ನು ಯಾರೋ ಕಳ್ಳರು ತೆಗೆದು ಒಳನುಗ್ಗಿ ಕ್ಯಾಶ್ ಬಾಕ್ಸ್ ನಲ್ಲಿ ಇಟ್ಟಿದ್ದ ₹. 1,12,500 ನಗದು ಹಣವನ್ನು […]
Southern Range
ಕಳವು ಪ್ರಕರಣ ಪತ್ತೆ, ಆರೋಪಿಗಳ ಬಂಧನ ಕೊಡಗು ಜಿಲ್ಲಾ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ
ಕೊಡಗು ಜಿಲ್ಲೆ ವಿರಾಜಪೇಟೆ ತಾಲೊಕು ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮೇಕೂರು ಹೊಸ್ಕೇರಿ ಗ್ರಾಮದ ಕೂತಂಡ ಸುಬ್ಬಯ್ಯರವರ ಮನೆಯಲ್ಲಿ ನಡೆದಿದ್ದ ಕಳವು ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಮಡಿಕೇರಿ ನಗರ ವೃತ್ತ ಮತ್ತು ಡಿಸಿಆರ್‌ಬಿ ಘಟಕದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರು ಯಶಸ್ವಿಯಾಗಿದ್ದಾರೆ. ದಿನಾಂಕ: 12-06-2022 ರಂದು ವಿರಾಜಪೇಟೆ ತಾಲ್ಲೂಕು ಮೇಕೂರು ಹೊಸ್ಕೇರಿ ಗ್ರಾಮದ ನಿವಾಸಿ ಸುಬ್ಬಯ್ಯ ಎಂಬುವವರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಯಾರೋ ಕಳ್ಳರು ಮುಂಬಾಗಿಲಿನ ಬೀಗವನ್ನು ಮುರಿದು […]
ಮೈಸೂರು ಜಿಲ್ಲಾ ಪೊಲೀಸರ ವತಿಯಿಂದ ಒಂದು ದಿನದ ಕಾರ್ಯಾಗಾರವನ್ನು ನಡೆಸಲಾಯಿತು
ಜಿಲ್ಲಾ ಅಭಿಯೋಜನಾ ಮತ್ತು ಜಿಲ್ಲಾ ಪೊಲೀಸ್ ವತಿಯಿಂದ ಇಂದು ಕಲಂ 293 CRPC ಅಡಿಯಲ್ಲಿ ನೀಡಲಾದ ತಜ್ಞ ವರದಿಗಳನ್ನು ನ್ಯಾಯಾಲಯಕ್ಕೆ ಹಾಜರ್ಪಡಿಸಿ ಸಾಕ್ಷ್ಯ ನೀಡುವಾಗ ಮತ್ತು ಕೋರ್ಟ್ ನಲ್ಲಿ ವಿಡಿಯೋ ಸಂವಾದ ನಡೆಸುವಾಗ ಅನುಸರಿಸಬೇಕಾದ ನಿಯಮಗಳ ಕುರಿತಾದ ಒಂದು ದಿನದ ಕಾರ್ಯಾಗಾರವನ್ನು ನಡೆಸಲಾಯಿತು. ಗೌರವಾನ್ವಿತ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಆದ ಶ್ರೀ.ರಘುನಾಥ್ ಎಂ.ಎಲ್ ರವರು, ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ […]
ಕೊಡಗು ಜಿಲ್ಲಾ ಪೊಲೀಸರಿಂದ ಕಾರ್ಯಾಚರಣೆ ಕಳವು ಪ್ರಕರಣ ಪತ್ತೆ, ಆರೋಪಿಗಳ ಬಂಧನ
ಕೊಡಗು ಜಿಲ್ಲೆ ವಿರಾಜಪೇಟೆ ತಾಲೊಕು ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕರಡಿಗೋಡು ಗ್ರಾಮದ ಇವಾಲ್ ಬ್ಯಾಕ್ ರೆಸಾರ್ಟ್ ನಲ್ಲಿ ನಡೆದಿದ್ದ ಕಳವು ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಮಡಿಕೇರಿ ನಗರ ಪೊಲೀಸ್ ವೃತ್ತ ನಿರೀಕ್ಷಕರು, ಸಿದ್ದಾಪುರ ಪೊಲೀಸ್ ಠಾಣಾ ಪಿಎಸ್ಐ ಮತ್ತು ಸಿಬ್ಬಂದಿಯವರು ಹಾಗೂ ಕೊಡಗು ಡಿ.ಸಿ.ಆರ್.ಬಿ ಘಟಕದ ಸಿಬ್ಬಂದಿಯವರ ತಂಡ ಯಶಸ್ವಿಯಾಗಿದ್ದಾರೆ. ದಿನಾಂಕ 01-04-2022 ರಂದು ಮುಂಬೈನಿಂದ ಬಾಲಕೃಷ್ಣ ಭಂಡಾರಿ ಮತ್ತು ಅವರ ಸಂಸಾರದವರು ಸಿದ್ದಾಪುರದ ಕರಡಿಗೋಡಿನ ಇವಾಲ್ ಬ್ಯಾಕ್ […]
ಮೈಸೂರು ಜಿಲ್ಲಾ ಪೊಲೀಸರಿಂದ ರಸ್ತೆ ಸುರಕ್ಷತಾ ಕಾರ್ಯಕ್ರಮ
ಇಲವಾಲ ಪೊಲೀಸ್ ಠಾಣೆಯಲ್ಲಿಂದು ರಸ್ತೆ ಸುರಕ್ಷತಾ ಕಾರ್ಯಕ್ರಮಕ್ಕೆ ಶಾಸಕರಾದ ಶ್ರೀ.ಜಿ.ಟಿ. ದೇವೇಗೌಡರವರು ಚಾಲನೆ ನೀಡಿದರು. ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ.ಚೇತನ್.ಆರ್ ಐಪಿಎಸ್ ರವರು ಸಹ ಹಾಜರಿದ್ದು ಸಾರ್ವಜನಿಕರ ಸುರಕ್ಷತೆಗಾಗಿ ಸಂಚಾರಿ ನಿಯಮಗಳಿದ್ದು ಕಡ್ಡಾಯವಾಗಿ ಪಾಲಿಸುವುದರಿಂದ ಅಪಘಾತಗಳನ್ನು ನಿಯಂತ್ರಿಸಿ ಮತ್ತು ಅಪಘಾತ ಸಮಯದಲ್ಲಿ ಜೀವವನ್ನು ಉಳಿಸಬಹುದೆಂದು ತಿಳಿಸಿದರು.
ಮೈಸೂರು ಜಿಲ್ಲಾ ಪೊಲೀಸ್ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ
ಜಿಲ್ಲಾ ಪೊಲೀಸ್ ಕಛೇರಿಯಲ್ಲಿಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಖ್ಯಾತ ರಂಗಭೂಮಿ ಕಲಾವಿದರಾದ ಶ್ರೀಮತಿ.ಸರೋಜ ಹೆಗಡೆ ರವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಮುಖ್ಯ ಅತಿಥಿಗಳಾಗಿ ಡಾ.ಅನನ್ಯ ಚೇತನ್ ರವರು , ಮಣಿಪಾಲ್ ಆಸ್ಪತ್ರೆ ಸ್ತ್ರೀ & ಪ್ರಸೂತಿ ತಜ್ಞೆ ಡಾ. ಮಧುರಾ ಪಾಟಕ್ ರವರು ಭಾಗವಹಿಸಿದ್ದರು. ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ.ಚೇತನ್.ಆರ್.ಐಪಿಎಸ್ ರವರು, ಅಪರ ಪೊಲೀಸ್ ಅಧೀಕ್ಷಕರಾದ ಶ್ರೀ. ಆರ್.ಶಿವಕುಮಾರ್ ರವರು ಹಾಗೂ ಜಿಲ್ಲೆಯ ಮಹಿಳಾ ಅಧಿಕಾರಿ […]
ಕಳವು ಪ್ರಕರಣ ಪತ್ತೆ, ಆರೋಪಿಗಳ ಬಂಧನ ಕೊಡಗು ಜಿಲ್ಲಾ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ
ದಿನಾಂಕ:05/08/2021 ರಂದು ಗೋಣಿಕೊಪ್ಪ ಠಾಣಾ ವ್ಯಾಪ್ತಿಯ ಅತ್ತೂರು ಗ್ರಾಮದ ಕೆ.ಎಸ್.ಮಾಚಯ್ಯರವರ ಮನೆಯಲ್ಲಿ ಹಾಡುಹಗಲೇ ಕಳ್ಳತನ ಮಾಡಿದ್ದ ಆರೋಪಿತರನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಗೋಣಿಕೊಪ್ಪ ಪೊಲೀಸ್ ವೃತ್ತ ನಿರೀಕ್ಷಕರು ಮತ್ತು ಸಿಬ್ಬಂದಿಯವರು ಯಶಸ್ವಿಯಾಗಿರುತ್ತಾರೆ. ಅತ್ತೂರು ಗ್ರಾಮದ ನಿವಾಸಿ ಕೆ.ಎಸ್.ಮಾಚಯ್ಯ ರವರು ದಿನಾಂಕ:05/08/2021 ರಂದು ಬೆಳಿಗ್ಗೆ 09.00 ಗಂಟೆಗೆ ಮನೆಗೆ ಬೀಗಹಾಕಿಕೊಂಡು ಅಮ್ಮತ್ತಿಯಲ್ಲಿರುವ ತಮ್ಮ ಕಾಫಿ ತೋಟಕ್ಕೆ ಹೋಗಿದ್ದು, ಸಂಜೆ ಮನೆಗೆ ವಾಪಾಸ್ಸು ಬಂದು ನೋಡುವಾಗ್ಗೆ ಮನೆಯ ಹೆಂಚನ್ನು ತೆಗೆದು ಯಾರೋ ಕಳ್ಳರು ಒಳನುಗ್ಗಿ […]
ಮಂಡ್ಯ ಜಿಲ್ಲಾ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ
ಮಂಡ್ಯ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ ಮೊ.ಸಂ.26/22 ಕಲಂ 379 ಐಪಿಸಿ ಪ್ರಕರಣದಲ್ಲಿ 5 ಜನ ಕುಖ್ಯಾತ ದ್ವಿಚಕ್ರ ವಾಹನ ಕಳ್ಳರ ಬಂಧನ ಒಟ್ಟು ಮೌಲ್ಯ 6 ಲಕ್ಷ ಮೌಲ್ಯದ 11 ದ್ವಿಚಕ್ರ ವಾಹನಗಳ ವಶ, ಆರೋಪಿಗಳು ಮತ್ತು ಮಾಲು ಪತ್ತೆ ಕಾರ್ಯದಲ್ಲಿ ಶ್ರಮಿಸಿದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವನ್ನು ಮಾನ್ಯ ಎಸ್.ಪಿ. ಮಂಡ್ಯ ರವರು ಪ್ರಶಂಸಿರುತ್ತಾರೆ
ಲಾರಿ ಚಾಲಕನನ್ನು ದರೋಡೆ ಮಾಡಿದ್ದ ಆರೋಪಿಗಳನ್ನು ಬಂಧಿಸಿದ ಬಿಳಿಕೆರೆ ಪೊಲೀಸರು-ಮೈಸೂರು ಜಿಲ್ಲಾ ಪೋಲಿಸ್
ದಿನಾಂಕ.06.01.2022 ರಂದು ರಾತ್ರಿ 10.45 ಗಂಟೆ ಸಮಯದಲ್ಲಿ ಬಿಳಿಕೆರೆ ಮಾರ್ಗವಾಗಿ ಕೇರಳದ ಕೂತುಪುರಂಗೆ ತುಮಕೂರಿನ ಸನ್ ವೀಕ್ ಕಂಪೆನಿಯಿಂದ ಕಬ್ಬಿಣವನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿಯ ಚಾಲಕನನ್ನು ಟಯೋಟಾ ಇಟಿಯೋಸ್ ಕಾರಿನಲ್ಲಿ ಬಂದ 05 ಜನ ಅಪರಿಚಿತರು, ಲಾರಿ ಚಾಲಕನ ಬಳಿಯಿದ್ದ 10ಸಾವಿರ ನಗದು ಹಣ, ಲಾರಿ ಕೀ ಮತ್ತು ಒಂದು ರಿಯಲ್ ಮೀ ಮೊಬೈಲ್ ಫೋನ್ ಅನ್ನು ಕಿತ್ತುಕೊಂಡು ಹೋಗಿರುತ್ತಾರೆ. ಈ ಬಗ್ಗೆ ಬಿಳಿಕೆರೆ ಪೊಲೀಸ್ ಠಾಣೆ ಯಲ್ಲಿ ಪ್ರಕರಣವನ್ನು […]
ಮೈಸೂರು ಜಿಲ್ಲಾ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ
ಕವಲಂದೆ ಪೊಲೀಸರ ಕಾರ್ಯಾಚರಣೆ 12 ಪ್ರತ್ಯೇಕ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಗಳ ಬಂಧನ ಸುಮಾರು ಐದು ಲಕ್ಷ ರೂ ಮೌಲ್ಯದ ವಿವಿಧ ಬೈಕ್ ಮತ್ತು ಚಿನ್ನ ವಶ. ಹಾಗೂ ಕೋವಿಡ್ 19 ನಿಯಮಗಳನ್ನು ಮೀರಿ ಬೈಕ್ ರೇಸಿಂಗ್ ವ಼ೀಲಿಂಗ್ ಮಾಡುತ್ತಿದ್ದವರ ಮೇಲೆ ನಂಜನಗೂಡು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿದ್ದರ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ. ಚೇತನ್.ಆರ್.ಐಪಿಎಸ್ ರವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು . ಡಿಎಸ್ಪಿ ನಂಜನಗೂಡು ಶ್ರೀ.ಗೋವಿಂದರಾಜು ರವರು, ಸಿಪಿಐ ನಂಜನಗೂಡು […]