HANS CHAAP ಎಂಬ ನಕಲಿ TOBACCO ಪ್ಯಾಕೆಟ್‌ಗಳನ್ನು ದೆಹಲಿಯಿಂದ ಬೆಂಗಳೂರಿಗೆ ಸರಬರಾಜು ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ವಶ. ಸುಮಾರು 10 ಲಕ್ಷ ರೂ ಬೆಲೆ ಬಾಳುವ ನಕಲಿ ತಂಬಾಕು ಪ್ಯಾಕ್ ಗಳು ಮತ್ತು ಒಂದು ಲಾರಿ ವಶ
ದಿನಾಂಕ: 23-02-2024 ರಂದು ರಾತ್ರಿ ಸುಮಾರು 09:00 ಘಂಟೆ ಸಮಯದಲ್ಲಿ ಜ್ಞಾನಭಾರತಿ ಪೊಲೀಸ್ ಠಾಣಾ ಸರಹದ್ದಿಗೆ ಬರುವ ಐಚ ವಾಹನವೊಂದರಲ್ಲಿ ತರಕಾರಿ ಸಾಗಾಣಿಕೆ ನೆಪದಲ್ಲಿ ನಕಲಿ ತಂಬಾಕು ಉತ್ಪನ್ನಗಳನ್ನು ದೆಹಲಿಯಿಂದ ಬೆಂಗಳೂರಿಗೆ ಸಾಗಾಣಿಕೆ ಮಾಡಿಕೊಂಡು ಬರುತ್ತಿದ್ದಾರೆಂದು ಸಿಸಿಬಿಯ ಸಂಘಟಿತ ಅಪರಾಧ ದಳದ ಸಿಬ್ಬಂದಿಯವರಿಗೆ ಖಚಿತ ಮಾಹಿತಿ ದೊರೆತ್ತಿರುತ್ತದೆ. ಈ ಮಾಹಿತಿ ಆಧರಿಸಿ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಉಲ್ಲಾಳು ಕೆರೆಯ ಬಳಿ ಲಾರಿಯನ್ನು ತಡೆದು ಪರಿಶೀಲಿಸಿದಾಗ ಸಾರ್ವಜನಿಕವಾಗಿ ಕಾಣಿಸುವಂತೆ 15 ಮೂಟೆಗಳಲ್ಲಿ ಆಲೂಗಡ್ಡೆ ಇದ್ದು, ಉಳಿದ ಮೂಟೆಗಳನ್ನು ಪರಿಶೀಲಿಸಲಾಗಿ 59 ಮೂಟೆಗಳಲ್ಲಿ HANS CHAAP TOBACCO ಪ್ಯಾಕೆಟ್‌ಗಳು ಇರುವುದು ಕಂಡುಬಂದಿರುತ್ತದೆ. ಈ ನಕಲಿ ತಂಬಾಕು ಪ್ಯಾಕುಗಳ ಸಾಗಾಣಿಕೆಯಲ್ಲಿ ತೊಡಗಿದ್ದ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆಯುವಲ್ಲಿ ಸಿಸಿಬಿ ಅಧಿಕಾರಿಗಳು ಯಶಸ್ವಿಯಾಗಿರುತ್ತಾರೆ.
ವಶಕ್ಕೆ ಪಡೆದ ವ್ಯಕ್ತಿಗಳ ವಶದಿಂದ ಸುಮಾರು 10 ಲಕ್ಷ ಮೌಲ್ಯದ ನಕಲಿ HANS CHAAP TOBACCO ಪ್ಯಾಕೆಟ್‌ಗಳನ್ನು ಮತ್ತು ಕೃತ್ಯಕ್ಕೆ ಬಳಸಿದ ಒಂದು ಲಾರಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರರಕಣ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ.
ವಶಕ್ಕೆ ಪಡೆದ ವ್ಯಕ್ತಿಗಳು ದೆಹಲಿಯಿಂದ ಕಡಿಮೆ ಬೆಲೆಗೆ ನಕಲಿ HANS CHAAP TOBACCO ಪ್ಯಾಕೆಟ್‌ಗಳನ್ನು ಖರೀದಿಸಿಕೊಂಡು, ಅದನ್ನು ತರಕಾರಿ ಮೂಟೆಗಳ ಮಧ್ಯೆ ಮರೆಮಾಚಿ ಇಟ್ಟುಕೊಂಡು ಬೆಂಗಳೂರಿಗೆ ತಂದು ಚಿಲ್ಲರೆ ಅಂಗಡಿಗಳಿಗೆ ಸರಬರಾಜು ಮಾಡುತ್ತಿದ್ದರೆಂಬ ಅಂಶವು ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿರುತ್ತದೆ.
ಸಿ.ಸಿ.ಬಿಯ ಸಂಘಟಿತ ಅಪರಾಧ ದಳ (ಪಶ್ಚಿಮ) ದ ಅಧಿಕಾರಿ ಮತ್ತು ಸಿಬ್ಬಂದಿಗಳು ಈ ತಲೆಮರೆಸಿಕೊಂಡಿದ್ದ ರೌಡಿಶೀಟರ್‌ನನ್ನು ಪತ್ತೆಹಚ್ಚಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿರುತ್ತಾರೆ.