ಪ್ರತಿ ವರ್ಷ ಅಕ್ಟೋಬರ್ 21ರಂದು ಆಚರಿಸಲಾಗುವ ಪೊಲೀಸ್ ಹುತಾತ್ಮರ ದಿನವನ್ನು ಇಂದು ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಆಚರಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಐಪಿಎಸ್ರವರು ಪ್ರಾಸ್ತಾವಿಕ ಭಾಷಣ ಮಾಡಿ 2020-21ನೇ ಸಾಲಿನಲ್ಲಿ ಕರ್ತವ್ಯದ ಸಮಯದಲ್ಲಿ ಹುತಾತ್ಮರಾದ ದೇಶದ ಎಲ್ಲಾ ರಾಜ್ಯಗಳ ಮತ್ತು ಇತರೆ ಕೇಂದ್ರೀಯ ಪೊಲೀಸ್ ಪಡೆಗಳ ಅಧಿಕಾರಿ ಮತ್ತು ಸಿಬ್ಬಂದಿಗಳ ಹೆಸರುಗಳನ್ನು ಓದುವ ಮೂಲಕ ಸ್ಮರಿಸಿದರು. ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾ ಪ್ರಧಾನ ಮತ್ತು […]
police commemoration day
ಪೊಲೀಸ್ ಹುತಾತ್ಮರ ದಿನಾಚರಣೆ -ಹುಬ್ಬಳ್ಳಿ-ಧಾರವಾಡ ಪೊಲೀಸ್
ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ವತಿಯಿಂದ ಇಂದು ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಆಚರಿಸಿ ಹುತಾತ್ಮ ಪೊಲೀಸರಿಗೆ ಗೌರವ ನಮನ ಸಲ್ಲಿಸಲಾಯಿತು. ಮುಖ್ಯ ಅತಿಥಿಗಳಾಗಿ ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ, ಮಾನ್ಯ ಪೊಲೀಸ್ ಆಯುಕ್ತರು, ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಇತರ ಹಿರಿಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.
ಪೊಲೀಸ್ ಹುತಾತ್ಮರ ದಿನಾಚರಣೆ -ಮೈಸೂರು ಜಿಲ್ಲಾ ಪೊಲೀಸ್
ಇಂದು ನಡೆದ ಪೊಲೀಸ್ ಹುತಾತ್ಮರ ದಿನಚಾರಣೆ ಅಂಗವಾಗಿ ಜಿಲ್ಲಾ ಪೊಲೀಸ್ ಕಛೇರಿಯ ಪಕ್ಕದ ಹುತಾತ್ಮರ ಉದ್ಯಾನವನದಲ್ಲಿ ಕರ್ತವ್ಯದಲ್ಲಿ ಮಡಿದ ಪೊಲೀಸ್ ಅಧಿಕಾರಿ ಸಿಬ್ಬಂದಿಗಳಿಗೆ ಗೌರವ ಸೂಚಿಸಿ ಹೂಗುಚ್ಚ ಇರಿಸಿ ಸ್ಮರಿಸಲಾಯಿತು. ಸಮಾರಂಭದ ಮುಖ್ಯ ಅತಿಥಿಗಳಾದ ಗೌರವಾನ್ವಿತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ.ಎಂ.ಎಲ್.ರಘುನಾಥ್ ರವರು , ದಕ್ಷಿಣ ವಲಯ ಐಜಿಪಿ ರವರಾದ ಶ್ರೀ.ಪ್ರವೀಣ್ ಮಧುಕರ್ ಪವಾರ್,ಐಪಿಎಸ್, ನಗರ ಪೊಲೀಸ್ ಆಯುಕ್ತರಾದ ಡಾ.ಚಂದ್ರಗುಪ್ತ,ಐಪಿಎಸ್, ಕೆಪಿಎ ನಿರ್ದೇಶಕರಾದ ಶ್ರೀ.ವಿಪುಲ್ ಕುಮಾರ್,ಐಪಿಎಸ್ ರವರು, ಜಿಲ್ಲಾ […]
ಪೊಲೀಸ್ ಹುತಾತ್ಮರ ದಿನಾಚರಣೆ -ಬೆಳಗಾವಿ ಜಿಲ್ಲೆ
ಬೆಳಗಾವಿ ಜಿಲ್ಲೆ ಮತ್ತು ಬೆಳಗಾವಿ ನಗರ ಪೊಲೀಸ್ ಘಟಕಗಳ ವತಿಯಿಂದ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾನ್ಯ ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾಧೀಶರರು ಹಾಗೂ ಜಿಲ್ಲೆಯ ಎಲ್ಲ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು. ಪೊಲೀಸರ ತ್ಯಾಗ ಮತ್ತು ಬಲಿದಾನ ಅವಿಸ್ಮರಣೀಯ.