ದಿನಾಂಕ 05.07.2022 ರಂದು ಸಂಜೆ 05.00 ಗಂಟೆಗೆ ಬೆಂಗಳೂರು ನಗರ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಸಾರ್ವಜನಿಕರ ಕುಂದುಕೊರತೆ ಮತ್ತು ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆಗಳನ್ನು ನಡೆಸಲಾಯಿತು. ಸಭೆಯಲ್ಲಿ ಎಲ್ಲಾ ಧರ್ಮದ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿರುತ್ತಾರೆ ಹಾಗೂ ತಮ್ಮ ಕುಂದುಕೊರತೆಗಳ ಬಗ್ಗೆ ತಿಳಿಸಿರುತ್ತಾರೆ.ಸದರಿ ಸಮಯದಲ್ಲಿ ಕಾನೂನು ಅರಿವು ಹಾಗೂ ಬಕ್ರೀದ್ ಹಬ್ಬದ ಸೂಚನೆಗಳ ಬಗ್ಗೆ ಜಾಗೃತಿ ಮೂಡಿಸಿ, ಅಪರಾಧ ತಡೆಗಟ್ಟಲು ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ತಿಳಿಸಲಾಯಿತು. […]
Thilaknagar Police
ತಿಲಕ್ ನಗರ್ ಪೊಲೀಸ್ ಠಾಣೆಯ ನೂತನ ಠಾಣಾಧಿಕಾರಿ ಅಧಿಕಾರ ಸ್ವೀಕಾರ
ಬೆಂಗಳೂರು ನಗರ ತಿಲಕ್ ನಗರ್ ಪೊಲೀಸ್ ಠಾಣೆಯ ನೂತನ ಠಾಣಾಧಿಕಾರಿಯಾಗಿ ಶ್ರೀ .ಶಂಕರಾಚಾರ್ .ಬಿ ಅಧಿಕಾರ ಸ್ವೀಕಾರ ಮಾಡಿದರು .ಈ ಹಿಂದೆ ಅವರು ಬೆಂಗಳೂರಿನ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಭಾರಿಯಾಗಿದ್ದರು.ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ತನ್ನ ಅಧಿಕಾರಾವಧಿಯಲ್ಲಿ ಸಹಕಾರ ನೀಡಿದ ಪ್ರತಿ ಸಂಸ್ಥೆಗೆ ಅವರು ಧನ್ಯವಾದ ಅರ್ಪಿಸಿದರು ಮತ್ತು ಇಲ್ಲಿಯೂ ಸಹ ಅದೇ ರೀತಿ ಸಹಕಾರ ನೀಡಬೇಕೆಂದು ವಿನಂತಿಸಿದರು.ಶ್ರೀ ಶಂಕರಾಚಾರ್ . ಬಿ ಅವರ ಹಿಂದಿನ ಅಧಿಕಾರಾವಧಿಯಲ್ಲಿ ವಿಲ್ಸನ್ […]
ಗಣೇಶ ಹಬ್ಬದ ಆಚರಣೆಗೆ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸಬೇಕು-ತಿಲಕ್ ನಗರ ಪೊಲೀಸ್
ಕರ್ನಾಟಕ ಸರ್ಕಾರವು ಭಾನುವಾರ (ಸೆಪ್ಟೆಂಬರ್ 5) ಕೋವಿಡ್ -19 ಸಾಂಕ್ರಾಮಿಕದ ನಡುವೆ ರಾಜ್ಯದಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಲು ಮಾರ್ಗಸೂಚಿಗಳನ್ನು ಪ್ರಕಟಿಸಿದೆ.ವಾರ್ಡ್ಗೆ ಒಂದು ಗಣೇಶ ಮೂರ್ತಿ ಪ್ರತಿಷ್ಠಾಪಿಸುವಾಗ ಸರ್ಕಾರದ ಪರಿಷ್ಕೃತ ಮಾರ್ಗಸೂಚಿಯನ್ನು ಪಾಲಿಸಬೇಕು. ರಾಜ್ಯದಾದ್ಯಂತ ಐದು ದಿನಗಳ ಕಾಲ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಭಾನುವಾರ ನಡೆದ ಕೋವಿಡ್ ನಿರ್ವಹಣೆಗೆ ಸಂಬಂಧಿಸಿದ ಉನ್ನತಮಟ್ಟದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.ಪೊಲೀಸ್ ಇಲಾಖೆ ಹಾಗೂ […]
ತಿಲಕ್ ನಗರ ಪೊಲೀಸರಿಂದ 75ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದರು
ಬೆಂಗಳೂರು: ದೇಶದಲ್ಲಿ ಇಂದು 75ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ. ದೇಶದ ಮೂಲೆ ಮೂಲೆಯಲ್ಲೂ ಸಂಭ್ರಮ ಕಳೆಕಟ್ಟಿದೆ. ಕೊರೊನಾ ಇರುವ ಹಿನ್ನೆಲೆ ಸರಳ ಹಾಗೂ ನಿಯಮದ ಪ್ರಕಾರವೇ ಸ್ವಾತಂತ್ರ್ಯ ಹಬ್ಬವನ್ನು ಆಚರಿಸಲಾಗುತ್ತಿದೆ.ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು. ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಗುವಾಗ ನಡೆದ ತ್ಯಾಗ ಬಲಿದಾನ ಸ್ಮರಣೆ ಮಾಡುತ್ತಾ ಬೆಂಗಳೂರು ನಗರ ತಿಲಕ್ ನಗರ ಠಾಣೆ ಪೊಲೀಸರು ಧ್ವಜಾರೋಹಣ ನೆರವೇರಿಸುವ ಮೂಲಕ ಸಾಕ್ಷಿಯಾದರು. ನಮ್ಮ ಮುಖ್ಯ […]
ತಿಲಕ್ ನಗರ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ
ತಿಲಕ್ ನಗರ ಠಾಣಾಧಿಕಾರಿ ಶ್ರೀ .ಎಂ. ಎಲ್. ಗಿರೀಶ್ ಅವರ ನೇತೃತ್ವದಲ್ಲಿ ನಡೆದ ಯಶಸ್ವಿ ಕಾರ್ಯಾಚರಣೆ.ದ್ವಿಚಕ್ರ ವಾಹನಗಳ ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು, ಕದ್ದ ವಾಹನಗಳನ್ನು ಮಾರಾಟ ಮಾಡುತ್ತಿದ್ದ ಸಮಯದಲ್ಲಿ ಆಗ್ನೇಯ ವಿಭಾಗದ ಪೊಲೀಸ್ ತಂಡವು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಆರೋಪಿಯಿಂದ ₹4,50,000/- ಮೌಲ್ಯದ 5 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ, ಜೆ .ಜಾನ್ ಪ್ರೇಮ್